ಅಭಿಪ್ರಾಯ / ಸಲಹೆಗಳು

ಇಲಾಖೆಯ ಸಾಧನೆಗಳು

2020-21ನೇ ಸಾಲಿನಲ್ಲಿ ಇಲಾಖೆಯಿಂದ ಕೈಗೊಂಡ ಅಭಿವೃದ್ದಿ ಕಾರ್ಯಕ್ರಮಗಳ ವಿವರ

 

 1. ರಾಜ್ಯ ಕೇಂದ್ರ ಗ್ರಂಥಾಲಯ ಶತಮಾನೋತ್ಸವ ಸ್ಮರಣಾರ್ಥವಾಗಿ 30 ಜಿಲ್ಲಾ 26 ನಗರ ಮತ್ತು 216 ತಾಲ್ಲೂಕು ಸಾರ್ವಜನಿಕ ಗ್ರಂಥಾಲಯಗಳು ಒಟ್ಟು 272 ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಮೇಲ್ದರ್ಜೆಗೇರಿಸಿ ಕ್ಲೌಡ್ ಮೂಲಕ ರಾಜ್ಯದಲ್ಲಿರುವ ಸರ್ಕಾರಿ ಪ್ರೌಢ ಶಾಲೆಗಳಿಗೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಸಂಪರ್ಕ ನೀಡಿ ಅಂದಾಜು 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಗ್ರಂಥಾಲಯ ಸೌಲಭ್ಯವನ್ನು ಒದಗಿಸಲಾಗಿದೆ.

 

 1. ಮುಂದುವರಿಕಾ ಕಾರ್ಯಕ್ರಮ ಅಡಿಯಲ್ಲಿ ಶಾಖಾ ಗ್ರಂಥಾಲಯಗಳ ನಿರ್ಮಾಣ ಮತ್ತು ದುರಸ್ಥಿ ಕಾಮಗಾರಿಯನ್ನು ರೂ. 104.00 ಲಕ್ಷಗಳ ವೆಚ್ಚದಲ್ಲಿ ಕೈಗೊಳ್ಳಲಾಗಿದೆ.

 

 

 1. ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಕ್ರಮವಾಗಿ ರೂ. 90.00 ಲಕ್ಷಗಳ ವೆಚ್ಚದಲ್ಲಿ ರೂ. 30.00 ಲಕ್ಷಕ್ಕೆ ಸೀಮಿತವಾದಂತೆ 03 ಶಾಖಾ ಗ್ರಂಥಾಲಯ ಮತ್ತು ರೂ.45.00 ಲಕ್ಷಗಳ ವೆಚ್ಚದಲ್ಲಿ ಪರಿಶಿಷ್ಟ ಜಾತಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 02 ಶಾಖಾ ಗ್ರಂಥಾಲಯ ಕಟ್ಟಡಗಳ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.

 

 1. ರಾಷ್ಟ್ರೀಯ ಗ್ರಂಥಾಲಯ ಸಪ್ತಾಹವನ್ನು ನವೆಂಬರ್ 14 ರಿಂದ 20ರವರೆಗೆ ಹಮ್ಮಿಕೊಳ್ಳಲಾಗುತ್ತದೆ. ಶಾಲಾ ಮಕ್ಕಳಿ ಹಾಗೂ ಸಾರ್ವಜನಿಕರಿಗೆ ವಿವಿಧ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗುತ್ತದೆ. ಈ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಿಬ್ಬಂದಿಯವರಿಗೆ ಇಲಾಖಾವತಿಯಿಂದ ಗ್ರಂಥಾಲಯ ಸೇವಾ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.

 

 

 1. ಸರ್ಕಾರದ ಆದೇಶದನ್ವಯ ಆಗಸ್ಟ್ 12ರಂದು ರಾಜ್ಯಾದ್ಯಂತ ಗ್ರಂಥಪಾಲಕರ ದಿನಾಚರಣೆಯನ್ನು ಆಚರಿಸಲಾಗುವುದು. ಈ ಸಂದರ್ಭದಲ್ಲಿ ಗ್ರಂಥಾಲಯ ವಿಜ್ಞಾನ, ಗ್ರಂಥಾಲಯಗಳ ಅಭಿವೃದ್ಧಿಗೆ ದುಡಿದ ಮಹನೀಯರಿಗೆ ಗೌರವ ಪೂರ್ವಕವಾಗಿ ಸನ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

 

 

 

 

 

 

 

ಇತ್ತೀಚಿನ ನವೀಕರಣ​ : 05-09-2020 03:52 PM ಅನುಮೋದಕರು: Shilpa C V


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಸಾರ್ವಜನಿಕ ಗ್ರಂಥಾಲಯ ಇಲಾಖೆ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080